ಮಂಗಳೂರು: ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜು ಕೊಡಿಯಾಲ್ ಬೈಲ್ನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ಸೋಮವಾರ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ಎಕ್ಸ್ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ.ನರೇಂದ್ರ ಎಲ್ ನಾಯಕ್ ಮಾತನಾಡಿ ವಿದ್ಯಾರ್ಜನೆಯ ಸಲುವಾಗಿ ಅನೇಕ ಭಾವನಾತ್ಮಕವಾದ ಅನುಭವಗಳನ್ನು ಪಡೆದಿದ್ದೀರಿ. ವಿದ್ಯಾರ್ಥಿ ದೆಸೆಯಲ್ಲಿ ಅನೇಕ ಸವಾಲುಗಳನ್ನು ಎದುರಿಸಿ ಶೈಕ್ಷಣಿಕವಾಗಿ ಬೆಳವಣಿಗೆ ಕಾಣುವ ಮೂಲಕ ಭವಿಷ್ಯದ ದಿನಗಳಲ್ಲಿಯೂ ಸಮಾಜಕ್ಕೆ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕು. ಜೀವನದಲ್ಲಿ ವೃತ್ತಿಪರತೆಯ ಮೂಲಕ ಯಶಸ್ಸನ್ನು ಕಾಣಬೇಕು ಎಂದು ಹೇಳಿದರು.
ಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಡಾ.ಉಷಾಪ್ರಭಾ ಎನ್ ನಾಯಕ್ ಮಾತನಾಡಿ ಪಿಯುಸಿ ಶಿಕ್ಷಣದಲ್ಲಿ ವಿದ್ಯಾರ್ಥಿಗಳು ಸಾಕಷ್ಟು ಸಿಹಿಕಹಿಗಳ ಅನುಭವಗಳನ್ನು ಕಾಣುವ ಮೂಲಕ ಮುಂದಿನ ಭವಿಷ್ಯದ ದಿನಗಳು ಉತೃಷ್ಟಮಟ್ಟದಲ್ಲಿರಲಿ ಹಾಗೂ ಸಾಧನೆಯನ್ನು ಮಾಡುವಲ್ಲಿ ಅವಕಾಶಗಳು ನಿಮ್ಮನ್ನು ಹುಡುಕಿಕೊಂಡು ಬರಲಿ ಎಂದು ಶುಭ ಹಾರೈಸಿದರು. ಪ್ರಾಂಶುಪಾಲರಾದ ಪ್ರೊ.ರಾಮಚಂದ್ರ ಭಟ್ ಅವರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿ ತಮ್ಮ ಅನುಭವವನ್ನು ಹಂಚಿಕೊಂಡರು.
ಇಂಗ್ಲೀಷ್ ವಿಭಾಗದ ಉಪನ್ಯಾಸಕಿ ಶ್ರೀಮತಿ ಝೀಟಾ ಡಿಸೋಜಾ ಕಾರ್ಯಕ್ರಮವನ್ನು ನಿರೂಪಿಸಿದರು. ವೇದಿಕೆಯಲ್ಲಿ ಶೈಕ್ಷಣಿಕ ಸಮಿತಿ ಸದಸ್ಯ ಶ್ರೀಯುತ ವಿನಯ್ ಕುಮಾರ್, ಕೋಚಿಂಗ್ ಹೆಡ್ ಶ್ರೀಯುತ ಕರುಣಾಕರ ಬಳ್ಕೂರು, ಅಸ್ಟಿಟೆಂಟ್ ಕೋಚಿಂಗ್ ಹೆಡ್ ಶ್ರೀಯುತ ಪ್ರಮೋದ್ ಕಿಣಿ, ಭೌತಶಾಸ್ತ್ರ ವಿಭಾಗದ ಉಪನ್ಯಾಸಕಿ ಶ್ರೀಮತಿ ರಾಧಿಕಾ ಭಟ್, ಕಾರ್ಯಕ್ರಮ ಸಂಯೋಜಕಿ ಇಂಗ್ಲೀಷ್ ವಿಭಾಗದ ಉಪನ್ಯಾಸಕಿ ವಿಲ್ಮಾ ಥೆರೆಸಾ ಹಾಗೂ ಇನ್ನಿತರರು ಉಪಸ್ಥಿತರಿದ್ಧರು.















