ಕೋಟ: ಸ್ಕೂಟರೊಂದು ಗೂಡ್ಸ್ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಫೆ.18ರಂದು ಮಧ್ಯಾಹ್ನ ವೇಳೆ ಗುಂಡ್ಮಿ ಗ್ರಾಮದ ಚೇಂಪಿ ಎಂಬಲ್ಲಿ ವಿಶ್ವಕರ್ಮ ಸಾಂಸ್ಕೃತಿಕ ಸಭಾ ಭವನದ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ಸ್ಕೂಟರ್ ಸವಾರ ಅನಂತ ಎಂದು ಗುರುತಿಸಲಾಗಿದೆ. ಹಿಂಬದಿ ಸವಾರ ವಿಶ್ವನಾಥ ಎಂಬವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಲ್ಪೆಯಿಂದ ಗುಲ್ವಾಡಿಗೆ ಹೋಗುತ್ತಿದ್ದ ಗೂಡ್ಸ್ ರಿಕ್ಷಾಕ್ಕೆ ಎದುರಿನಿಂದ ಬರುತ್ತಿದ್ದ ಸ್ಕೂಟರ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಅಪಘಾತ ತಪ್ಪಿಸುವ ಭರದಲ್ಲಿ ಡಿವೈಡರ್ ಮೇಲೆ ಹತ್ತಿದ್ದ ರಿಕ್ಷಾ ಪಲ್ಟಿಯಾಯಿತು. ಅಪಘಾತದಿಂದ ಸ್ಕೂಟರ್ ಸವಾರರಿಬ್ಬರು ರಸ್ತೆ ಬಿದ್ದಿದ್ದು, ಇದರಲ್ಲಿ ಗಂಭೀರವಾಗಿ ಗಾಯಗೊಂಡ ಅನಂತ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












