ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕೋಟ ಹೈಸ್ಕೂಲ್ ಸಮೀಪ ಇಂದು ಸಂಭವಿಸಿದೆ.
ಕಾರನ್ನು ಚಲಾಯಿಸುತ್ತಿದ್ದಾಗ ಚಾಲಕನಿಗೆ ತಲೆ ಸುತ್ತು ಬಂದಿದ್ದು, ಈ ವೇಳೆ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಕಾರಿನಲ್ಲಿ ಮೆಸ್ಕಾಂನ ಸಿಬ್ಬಂದಿ ಹಾಗೂ ಅಧಿಕಾರಿ ವರ್ಗದವರಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.