ಕೌಶಾಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಕೌಶಾಲ್ಯಾಭಿವೃದ್ಧಿ ತರಬೇತಿ ಹಾಗೂ ಎಲೆಕ್ಟಾçನಿಕ್ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ತರಬೇತಿ ನೀಡಲು ಅರ್ಹ ಪರಿಶಿಷ್ಟ ಪಂಗಡದ ಪತ್ರಿಕೋದ್ಯಮ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಗರದ ಮಣಿಪಾಲದ ರಜತಾದ್ರಿಯ ಜಿಲ್ಲಾಡಳಿತ ಕಛೇರಿಗಳ ಸಂಕೀರ್ಣದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರ ಕಛೇರಿ “ಬಿ” ಬ್ಲಾಕ್, ಕೊಠಡಿ ಸಂಖ್ಯೆ 307 ರನ್ನು ಅಥವಾ ದೂ.ಸಂ: 0820-2574018 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.