ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ

ಉಡುಪಿ: ಕಳೆದ ಐದು ವರ್ಷಗಳಲ್ಲಿ ಭಾರತ
ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸಿರುವ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಪದಕ ಪಡೆದ ಹಾಗೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಭಾರತ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ
ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರಥಮ ಪಿ.ಯು.ಸಿ ಯಿಂದ ಸ್ನಾತಕೋತ್ತರ ಪದವಿ (ವೃತ್ತಿಪರ ಕೋರ್ಸ್ ಗಳನ್ನೊಳಗೊಂಡಂತೆ) ವ್ಯಾಸಂಗ ಮಾಡುತ್ತಿರುವ ಕೇಂದ್ರ, ರಾಜ್ಯ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲಾ-ಕಾಲೇಜುಗಳ ಕ್ರೀಡಾ ವಿದ್ಯಾರ್ಥಿಗಳಾಗಿರಬೇಕು.

ಅರ್ಜಿ ಸಲ್ಲಿಸಲು ಸೆಪ್ಟಂಬರ್ 6 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ,
ಅಜ್ಜರಕಾಡು ಉಡುಪಿ ದೂ.ಸಂ:0820-2521324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.