ಗದಗ್ ನಲ್ಲಿ ಭೀಕರ ಅಪಘಾತ; ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

ಗದಗ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವಿಗೀಡಾಗಿರುವ ಘಟನೆ ತಾಲೂಕಿನ ಶುಕ್ರವಾರ (ಜ.03) ತಡರಾತ್ರಿ ಹುಲಕೋಟಿ ಬಳಿ ನಡೆದಿದೆ.

ಹೊಸಪೇಟೆ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಮಹ್ಮದ್ ಜಾಯಿದ್ (18) ಹಾಗೂ ಸಂಜೀವ ಗಿರಡ್ಡಿ (15) ಎನ್ನುವ ಯುವಕರು ಮೃತ ದುರ್ದೈವಿಗಳಾಗಿದ್ದಾರೆ.

ಆಶೀಸ್ ಗೂಡುರ್ ಹಾಗೂ ಚಾಲಕ ಸಪ್ತಗಿರಿ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತಡರಾತ್ರಿ ಈ ಅಪಘಾತ ಸಂಭವಿಸಿದ್ದು, ಹುಲಕೋಟಿಯಿಂದ ವೇಗವಾಗಿ ಗದಗ ಕಡೆ ಬರುವಾಗ ಡಿವೈಡರ್ ಗೆ ಡಿಕ್ಕಿಯಾಗಿ ಈ‌ ದುರ್ಘಟನೆ ಸಂಭವಿಸಿದೆ.

ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Oplus_131072