ಉಡುಪಿ: ಕರ್ನಾಟಕ ಲೋಕ ಸೇವಾ ಆಯೋಗದ
ವತಿಯಿಂದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ”ಎ” ಮತ್ತು ”ಬಿ” ವೃಂದದ ಹುದ್ದೆಗಳ ಪೂರ್ವಬಾವಿ ಪರೀಕ್ಷೆಗಳು ಆಗಸ್ಟ್ 27 ರಂದು ಉಡುಪಿಯ ಸರ್ವಿಸ್ ಬಸ್ ಸ್ಟ್ಯಾಂಡ್ ಹತ್ತಿರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಅಜ್ಜರಕಾಡುವಿನ ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ
ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ
ಅವ್ಯವಹಾರಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗಧಿಪಡಿಸಿದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ
ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.












