ಜನತಾ ಪದವಿಪೂರ್ವ ಕಾಲೇಜಿನ ರಿಮೇಶ್ ರಾಜ್ಯ ಮಟ್ಟದ ಟೆನ್ನಿಕ್ವಾಯಿಟ್ ಪಂದ್ಯಕ್ಕೆ ಆಯ್ಕೆ.

ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪದವಿಪೂರ್ವ ವಿಭಾಗದ ಜಿಲ್ಲಾ ಮಟ್ಟದ ಟೆನ್ನಿಕ್ವಾಯಿಟ್ ಪಂದ್ಯದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ರಿಮೇಶ್
ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.

ಸಾಧಕ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.