ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಗಣೇಶ ಮೊಗವೀರ ಅವರಿಗೆ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಸರ್ದಾರ್ ಪಟೇಲ್ ಯುನಿಟಿ ಅವಾರ್ಡ್ಸ್-2025 ಆಯ್ಕೆ.

ಕುಂದಾಪುರ: ಪ್ರತಿಷ್ಠಿತ ಟೊಪ್ನೆಟೆಕ್ ಪೌಂಡೇಶನ್ ನವರು ಕೊಡಮಾಡುವ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಸರ್ದಾರ್ ಪಟೇಲ್ ಯುನಿಟಿ ಅವಾರ್ಡ್ಸ್ 2025-“ಶಿಕ್ಷಣ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಅತ್ಯಂತ ಸ್ಪೂರ್ತಿದಾಯಕ ವ್ಯಕ್ತಿತ್ವ”
ಈ ಪ್ರಶಸ್ತಿಗೆ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರರವರನ್ನು ಆಯ್ಕೆ ಮಾಡಲಾಗಿದ್ದು, ಇವರು ಇದುವರೆಗೆ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಾಗೂ ಸೇವೆಯನ್ನು ಪರಿಗಣಿಸಿ ಆಯ್ಕೆ ಪ್ರಕ್ರಿಯೆಯ ಮೂಲಕ ಆಯ್ಕೆ ಮಾಡಲಾಗಿದ್ದು, ಏಪ್ರಿಲ್ 11ರಂದು ಗೋವಾದಲ್ಲಿ ನಡೆಯಲಿರುವ ವೈಭವದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಆಯ್ಕೆ ಸಮಿತಿಯ ಪ್ರಕಟಣೆ ತಿಳಿಸಿದೆ.