ಜಿಲ್ಲಾ ಸರಕಾರಿ ವಾಹನ ಚಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

ಉಡುಪಿ: ಜಿಲ್ಲಾ ಸರಕಾರಿ ವಾಹನ ಚಾಲಕರ ಕೇಂದ್ರ ಸಂಘ, ಸಾರಥಿ ಭವನ, ಉಡುಪಿ ಇದರ ಮಹಾಸಭೆಯು ಇತ್ತೀಚೆಗೆ ನಡೆದಿದ್ದು, ಸಭೆಯಲ್ಲಿ ಮುಂದಿನ 5 ವರ್ಷಗಳ ಅವಧಿಗೆ ಲೋಕೋಪಯೋಗಿ ಇಲಾಖೆಯ ಜಬಿಯುಲ್ಲಾಖಾನ್ ಅವರು ಅಧ್ಯಕ್ಷರಾಗಿ ಅವಿರೋಧವಾಗಿ ಸರ್ವಾನುಮತದಿಂದ ಆಯ್ಕೆಯಾದರು.

ಉಪಾಧ್ಯಕ್ಷರಾಗಿ ಆರೋಗ್ಯ ಇಲಾಖೆಯ ಧರ್ಮೇಂದ್ರ ಎಸ್, ಕಾರ್ಯದರ್ಶಿಯಾಗಿ ಸಮಾಜ ಕಲ್ಯಾಣ ಇಲಾಖೆಯ ದಾಮೋದರ, ಖಜಾಂಜಿಯಾಗಿ ಅಬಕಾರಿ ಇಲಾಖೆಯ ದಿನೇಶ್, ಸಂಘಟನಾ ಕಾರ್ಯದರ್ಶಿಯಾಗಿ ಸಣ್ಣ ನೀರಾವರಿ ಇಲಾಖೆಯ ಟಿ.ಕೆ ದೇವದಾಸ್, ಜೊತೆ ಕಾರ್ಯದರ್ಶಿಯಾಗಿ ಆರೋಗ್ಯ ಇಲಾಖೆಯ ಸತೀಶ್ ಕೆ ಮತ್ತು ಕಾರ್ಯಕಾರಿ ಸಮಿತಿಗೆ ಕಂದಾಯ ಇಲಾಖೆಯ ಮಚೇಂದ್ರ ಜೋಗಿ ಹಾಗೂ ಸಿದ್ದಾರೂಡ, ಆರೋಗ್ಯ ಇಲಾಖೆಯ ದಿನೇಶ್ ಕುಮಾರ್, ಶಂಕರ ಪಿ ಹಾಗೂ ಮಂಜುನಾಥ್ ಅವರನ್ನು ಸರ್ವಾನುಮತದಿಂದ ಆಯ್ಕೆಯಾದರು.

ಸಂದರ್ಭದಲ್ಲಿ ಇತ್ತೀಚೆಗೆ ಸೇವೆಯಿಂದ ವಯೋನಿವೃತ್ತಿ ಹೊಂದಿದ ಅರಣ್ಯ ಇಲಾಖೆಯ ಜೋಯ್ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಸಭೆಯಲ್ಲಿ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಅಂಪಾರು ದಿನಕರ ಶೆಟ್ಟಿ, ರಾಜ್ಯ ಪರಿಷತ್ ಸದಸ್ಯ ಆನಂದ ಜತ್ತನ್ನ, ಮಾಜಿ ಅಧ್ಯಕ್ಷ ಸೂರ್ಯ ಶೇರಿಗಾರ್, ಮಾಜಿ ಉಪಾಧ್ಯಕ್ಷ ಕೇಶವ ಪೂಜಾರಿ, ನಿಕಟಪೂರ್ವ ಅಧ್ಯಕ್ಷ ಶೇಷಪ್ಪ ಹಾಗೂ ರೋಹಿತ್ ಕುಮಾರ್ ಉಪಸ್ಥಿತರಿದ್ದರು.