ಜುಲೈ 15ರಂದು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ: ರೆಡ್ ಅಲರ್ಟ್ ಘೋಷಣೆ

ಉಡುಪಿ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.15 ರಂದು ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ರೆಡ್‌ ಅಲರ್ಟ್‌ ಘೋಷಿಸಿದೆ.

ಜು.16 ರಿಂದ 18ರವರೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯಾದ್ಯಂತ ಭಾನುವಾರ ದಿನವಿಡೀ ಉತ್ತಮ ಮಳೆಯಾಗಿದೆ.