ಜುಲೈ 15ರಂದು ಸಾಲ್ಮರದಲ್ಲಿ ಕೃಷ್ಣವೇಣಿ ಆಶ್ರಯಧಾಮ, ಕೃಷ್ಣವೇಣಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನೆ

ಉಡುಪಿ: ಸಾಲ್ಮರ ಗೋವಿಂದ ಭಟ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಕಾಪು ತಾಲೂಕಿನ ಶಂಕರಪುರದ ಸಾಲ್ಮರದಲ್ಲಿ ನಿರ್ಮಿಸಿರುವ ನೂತನ ಕೃಷ್ಣವೇಣಿ ಆಶ್ರಯಧಾಮ ಹಾಗೂ ಕೃಷ್ಣವೇಣಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನೆ ಇದೇ ಜುಲೈ 15ರಂದು ಸಂಜೆ 4ಗಂಟೆಗೆ ನಡೆಯಲಿದೆ ಎಂದು ಸಾಲ್ಮರ ಗೋವಿಂದ ಭಟ್ ಫ್ಯಾಮಿಲಿ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ಹರಿದಾಸ್ ಭಟ್ ಹೇಳಿದರು.
ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಉಡುಪಿ ಕೃಷ್ಣಾಪುರ ಮಠಾಧೀಶರಾದ ವಿದ್ಯಾಸಾಗರತೀರ್ಥ ಸ್ವಾಮೀಜಿ ನೂತನ ಕಟ್ಟಡಗಳನ್ನು ಉದ್ಘಾಟಿಸಲಿದ್ದಾರೆ. ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ನಿಟ್ಟೆ ಎನ್ಎಂಎಎಂಐಟಿ ಕಾಲೇಜಿನ ಪ್ರಾಂಶುಪಾಲ ಡಾ. ನಿರಂಜನ್ ಎನ್. ಚಿಪ್ಳೂಣ್ಕರ್, ಕುರ್ಕಾಲು ಗ್ರಾಪಂ ಅಧ್ಯಕ್ಷ ಪ್ರಶಾಂತ್ ಪೂಜಾರಿ, ಇನ್ನಂಜೆ ಗ್ರಾಪಂ ಅಧ್ಯಕ್ಷೆ ಮಾಲಿನಿ ಶೆಟ್ಟಿ, ಕಟಪಾಡಿ ಗ್ರಾಪಂ ಅಧ್ಯಕ್ಷೆ ಪ್ರಭಾ ಶೆಟ್ಟಿ, ಮಾಜಿ ಜಿಪಂ ಸದಸ್ಯೆ ಗೀತಾಂಜಲಿ ಸುವರ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕೃಷ್ಣವೇಣಿ ಆಯುರ್ವೇದ ಆಸ್ಪತ್ರೆಯ ಸಿಇಒ ಡಾ. ಐ. ರಮೇಶ್ ಮಿತ್ತಂತಾಯ, ಮುಖ್ಯ ವೈದ್ಯಾಧಿಕಾರಿ ಡಾ. ಕೆ. ಲಕ್ಷ್ಮೀಶ್ ಉಪಾಧ್ಯಾಯ ಉಪಸ್ಥಿತರಿದ್ದರು.