ಡಾ.ಜಿ.ಶಂಕರ್ ಸರಕಾರಿ ಕಾಲೇಜಿನಲ್ಲಿ ಹೆಚ್.ಐ.ವಿ ಏಡ್ಸ್ ಕುರಿತು ಅರಿವು ಮತ್ತು ಜಾಗೃತಿ ಕಾರ್ಯಕ್ರಮ

ಉಡುಪಿ 20: ಡಾ. ಜಿ. ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ ಅಜ್ಜರಕಾಡು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ, ಐ.ಕ್ಯೂ.ಎ.ಸಿ, ರೆಡ್‌ರಿಬ್ಬನ್ ಕ್ಲಬ್ ಮತ್ತು ಉಡುಪಿ ಜಿಲ್ಲಾ ಏಡ್ಸ್ ನಿಂಯತ್ರಣ ಹಾಗು ತಡೆಗಟ್ಟುವ ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ಹೆಚ್.ಐ.ವಿ ಏಡ್ಸ್ ಕುರಿತು ಅರಿವು ಮತ್ತು ಜಾಗೃತಿ ಕಾರ್ಯಕ್ರಮವನ್ನು ಕಾಲೇಜಿನ ಯು.ಜಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಉಪಸ್ಥಿತರಿದ್ದ ಜಿಲ್ಲಾ ಅಧೀಕ್ಷಕರು, ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಘಟಕ ಉಡುಪಿ ಮಹಾಬಲೇಶ್ವರ ಬಿ. ಇವರು ಮಾತನಾಡಿ ಉಡುಪಿ ಜಿಲ್ಲೆಯನ್ನು ಏಡ್ಸ್ ಮುಕ್ತ ಜಿಲ್ಲೆಯನ್ನಾಗಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಹೆಚ್.ಐ.ವಿ ಏಡ್ಸ ನ೦ತಹ ಮಹಾಮಾರಿ ಕಾಯಿಲೆಯ ಕುರಿತು ಯುವ ಜನರಲ್ಲಿ ಅರಿವು ಮತ್ತು ಜಾಗೃತಿ ಇರುವುದು ಬಹು ಮುಖ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಆಸರೆ ಫೌಂಡೇಶನ್‌ನ ಸಂಜೀವ ವಂಡ್ಸೆ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ತಮ್ಮ ಜೀವನದ ಅನುಭವವನ್ನು ವಿದ್ಯಾರ್ಥಿನಿಯರೊಂದಿಗೆ ಹಂಚಿಕೊ೦ಡರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಶ್ರೀಧರ್ ಪ್ರಸಾದ್ ಕೆ ವಹಿಸಿದ್ದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರೊ. ನಿಕೇತನಾ ಪ್ರಸ್ತಾವಿಕವಾಗಿ ಮಾತನಾಡಿ ಅಥಿತಿಗಳನ್ನು ಸ್ವಾಗತಿಸಿದರು. ವಿದ್ಯಾ ಡಿ. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.