ಡಿಕೆ ಶಿವಕುಮಾರ್ ಹೇಳಿಕೆ ಖಂಡನೀಯ: ರಾಜ್ಯ ಎಸ್ ಸಿ ಮೋರ್ಚಾ ಉಪಾಧ್ಯಕ್ಷ ದಿನಕರ್ ಬಾಬು.

ಮಂಗಳೂರು: ಮುಸ್ಲಿಮರ ಓಲೈಕೆಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌ ಅಂಬೇಡ್ಕರ್‌ ಈ ದೇಶಕ್ಕೆ ಕೊಟ್ಟಿರುವ ಸಂವಿಧಾನವನ್ನೇ ತಿದ್ದುಪಡಿ ಮಾಡಬೇಕೆಂದು ಉಪಮುಖ್ಯಮಂತ್ರಿ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿರುವುದು ಅತ್ಯಂತ ಖಂಡನೀಯ ಹಾಗೂ ಆತಂಕಕಾರಿ ಬೆಳವಣಿಗೆ ಎಂದು ರಾಜ್ಯ ಎಸ್ ಸಿ ಮೋರ್ಚಾ ದ ಉಪಾಧ್ಯಕ್ಷ ದಿನಕರ್ ಬಾಬು ಅವರು ತೀವ್ರವಾಗಿ ಖಂಡಸಿದ್ದಾರೆ.

ಮುಸ್ಲಿಮರ ವೋಟ್‌ ಬ್ಯಾಂಕ್‌ ಗೆ ಇಡೀ ಸಂವಿಧಾನದ ಅಡಿಪಾಯವನ್ನೇ ಅಲುಗಾಡಿಸಲು ಹೊರಟಿರುವುದು ಅತೀ ಗಂಭೀರವಾದ ಸಂಗತಿ. ಅಂಬೇಡ್ಕರ್‌ ನೀಡಿದ ಸಂವಿಧಾನವನ್ನೇ ಬುಡಮೇಲು ಮಾಡಿ ಮುಸ್ಲಿಮರ ಪ್ರತ್ಯೇಕತೆಯ ಸಮಾಜ ನಿರ್ಮಿಸಲು ಬಿಜೆಪಿ ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ.