ತಿರುಪತಿ ಲಡ್ಡುವಿನಲ್ಲಿ ಕಲಬೆರಕೆ ವಿವಾದ: ಎಸ್‌ಐಟಿ ತನಿಖೆಗೆ ಆದೇಶ ನೀಡಿದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು

ಅಮರಾವತಿ: ತಿರುಪತಿ ಪ್ರಸಾದದಲ್ಲಿ ಕಲಬೆರಕೆ ನಡೆಯುತ್ತಿದೆ ಎಂಬ ಆರೋಪದ ವಿವಾದದ ನಡುವೆ, ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಈ ಬಗ್ಗೆ ತನಿಖೆ ನಡೆಸಲು ಎಸ್‌ಐಟಿ ರಚನೆಗೆ ಆದೇಶಿಸಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ನಾಯ್ಡು, ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (ಐಜಿಪಿ) ಮತ್ತು ಅದಕ್ಕಿಂತ ಹೆಚ್ಚಿನ ಶ್ರೇಣಿಯ ಹಿರಿಯ ಅಧಿಕಾರಿಗಳನ್ನು ಒಳಗೊಂಡ ಎಸ್‌ಐಟಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಿದ್ದು, ಅದರ ಆಧಾರದ ಮೇಲೆ ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.