ತೀರ್ಥಹಳ್ಳಿ: ಬೆಂಗಳೂರಿನಲ್ಲಿ ಬುಧವಾರ ತಾಲೂಕು ದಂಡಾಧಿಕಾರಿ ಜಕ್ಕಣ್ಣ ಗೌಡರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ತಹಶೀಲ್ದಾರ್ ಜಕ್ಕಣ್ಣ ಗೌಡರ್ ನ್ಯಾಯಾಲಯದ ಕೆಲಸ ಕಾರ್ಯಗಳ ನಿಮಿತ್ತ ಬೆಂಗಳೂರಿಗೆ ತೆರಳಿದ್ದರು. ಬೆಂಗಳೂರಿನ ನರ್ತಕಿ ಚಿತ್ರಮಂದಿರ ಎದುರು ಇರುವ ವೈಭವ ಲಾಡ್ಜ್ ನಲ್ಲಿ ತಂಗಿದ್ದರು. ಬುಧವಾರ ರಾತ್ರಿ 10 ಗಂಟೆಯ ಸಮಯದಲ್ಲಿ ತೀವ್ರ ತರದ ಎದೆ ನೋವು ಕಂಡು ಬಂದಿದ್ದು ಹೃದಯಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.