ಮಂಗಳೂರು: ತ್ರಿಶಾ ಕ್ಲಾಸಸ್ ವತಿಯಿಂದ ಸಿಎ ಇಂಟರ್ಮೀಡಿಯಟ್ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರವು ಆಗಸ್ಟ್11 ರಂದು ಮಂಗಳೂರಿನ ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್ಮೆಂಟ್ ಅಳಕೆಯ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ತ್ರಿಶಾ ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ಡಾ. ನಾರಾಯಣ್ ಕಾಯರ್ ಕಟ್ಟೆ ಅವರು ವಿದ್ಯಾರ್ಥಿಗಳು ವಿಷಯದ ಬಗ್ಗೆ ಪರಿಪೂರ್ಣ ಮಾಹಿತಿ, ಪ್ರಚಲಿತ ವಿದ್ಯಮಾನಗಳನ್ನು ಅರಿತುಕೊಳ್ಳುವುದು ಮತ್ತು ಆತ್ಮವಿಶ್ವಾಸ ಬೆಳೆಸಿಕೊಳ್ಳುವುದು ಮುಖ್ಯ ಎಂದರು ಹಾಗೂ ತ್ರಿಶಾ ಸಂಸ್ಥೆಯು 26 ವರ್ಷಗಳನ್ನು ಪೂರೈಸಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಯಶಸ್ಸನ್ನು ತನ್ನದಾಗಿಸಲಿ ಎಂದು ಶುಭ ಹಾರೈಸಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ತ್ರಿಶಾ ಸಂಸ್ಥೆಯ ಸಂಸ್ಥಾಪಕರಾದ ಸಿ ಎ ಗೋಪಾಲ ಕೃಷ್ಣಭಟ್ ಅವರು ವಿದ್ಯಾರ್ಥಿಗಳಿಗೆ ಸಿಎ ಇಂಟರ್ಮೀಡಿಯಟ್ ಕೋರ್ಸಿನ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ತ್ರಿಶಾ ಕ್ಲಾಸಸ್ ಮಂಗಳೂರು ಕೇಂದ್ರದ ಮುಖ್ಯಸ್ಥೆ ಯಶಸ್ವಿನಿ ಯಶ್ ಪಾಲ್, ವಿದ್ಯಾರ್ಥಿಗಳು, ಪಾಲಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಆದಿತ್ಯಾ ಜೆ ಶೆಟ್ಟಿನಿರೂಪಿಸಿ, ಶಿವಾನಿ ಶೆಣೈ ಸ್ವಾಗತಿಸಿ, ವಂದಿಸಿದರು.