ದಕ್ಷಿಣ ಕನ್ನಡ ವಿಧಾನ ಪರಿಷತ್‌ ಉಪಚುನಾವಣೆಯಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿಗೆ ಭರ್ಜರಿ ಗೆಲುವು

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಜನಪ್ರತಿನಿಧಿಗಳ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್‌ ಉಪ ಚುನಾವಣೆಯಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಅಕ್ಟೋಬರ್ 21 ರಂದು ಚುನಾವಣೆ ನಡೆದಿತ್ತು, ಅದರಂತೆ ಇಂದು ಗುರುವಾರ (ಅ.24) ಚುನಾವಣಾ ಫಲಿತಾಂಶ ಹೊರಬಿದ್ದಿದೆ.

ಕಾಂಗ್ರೆಸ್ ನ ರಾಜು ಪೂಜಾರಿ ಅವರಿಗಿಂತ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಇನ್ನು ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.