ಉಡುಪಿ: ಉಡುಪಿ ತಾಲೂಕಿನ ಮಣಿಪುರ ಗ್ರಾಮದ ದೆಂದೂರುಕಟ್ಟೆಯ ಮನೋಜ್ ಬಾರ್ ಬಳಿ ಯುವಕನೋರ್ವ ಮೃತದೇಹ ಪತ್ತೆಯಾಗಿದೆ.
ಮೃತ ಯುವಕನನ್ನು ಅಶೋಕ್ ದೇವಾಡಿಗ (40) ಎಂದು ಗುರುತಿಸಲಾಗಿದೆ.
ಬಾರ್ ಸಮೀಪದ ಪೊದೆಯಲ್ಲಿ ಯುವಕ ಪ್ರಜ್ಞಾಹಿನ ಸ್ಥಿತಿಯಲ್ಲಿ ಬಿದ್ದಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಸ್ಥಳೀಯರ ಸಹಕಾರದೊಂದಿಗೆ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದರು. ಅಲ್ಲಿ ಪರೀಕ್ಷಿಸಿದ ವೈದ್ಯರು ಯುವಕ ಅದಾಗಲೇ ಮೃತಪಟ್ಟಿದ್ದಾರೆ ಎಂದು ದೃಢೀಕರಿಸಿದ್ದಾರೆ.












