“ದ್ವಿತೀಯ ಪಿಯುಸಿ ಫಲಿತಾಂಶ, ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ”

ಬೆಂಗಳೂರು :ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯು 95.34% ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದೆ.

ಕಳೆದ ಬಾರಿಯಂತೆ ಈ ಬಾರಿ ಕೂಡ ಈ ಬಾರಿ ದಕ್ಷಿಣ ಕನ್ನಡ (95.34%) ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಉಡುಪಿ (95.24%) ಎರಡನೇ ಸ್ಥಾನ ಪಡೆದಿದೆ. ಕೊಡಗು (90.55%) ತೃತೀಯ ಸ್ಥಾನ ಪಡೆದಿದೆ.  ಯಾದಗಿರಿ ಕೊನೆಯ ಸ್ಥಾನ ಪಡೆದಿದೆ. ಉತ್ತರ ಕನ್ನಡ 90%, ವಿಜಯಪುರ 85%, ಚಿಕ್ಕಮಗಳೂರು 83% ಫಲಿತಾಂಶ ಪಡೆದಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾರ್ಚ್ ನಲ್ಲಿ ನಡೆಸಿದ್ದ 2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಫಲಿತಾಂಶ ಶುಕ್ರವಾರ ಬಿಡುಗಡೆಯಾಗಿದೆ. ಈ ಬಾರಿ ದ್ವಿತೀಯ ಪಿಯುಸಿ 74.67% ಫಲಿತಾಂಶ ಬಂದಿದೆ.  ಈ ಬಾರಿ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಈ ಬಾರಿ 42 ಸರಕಾರಿ ಕಾಲೇಜುಗಳು ಮತ್ತು 10 ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಶೇ.100 ಫಲಿತಾಂಶ ಬಂದಿದೆ. ಒಟ್ಟು 78 ಸರಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ.

ಈ ಮೂಲಕ  ನಿರೀಕ್ಷೆಗಿಂತ ಎರಡು ವಾರದ ಮೊದಲೇ ಫಲಿತಾಂಶ ಪ್ರಕಟಿಸಲಾಗಿದೆ. ಮಲ್ಲೇಶ್ವರದಲ್ಲಿರುವ ಮಂಡಳಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ  ಫಲಿತಾಂಶ ಪ್ರಕಟಿಸಲಾಗಿದೆ.  ಬೆಳಗ್ಗೆ 11 ಗಂಟೆಯ ವೇಳೆಗೆ ವಿದ್ಯಾರ್ಥಿಗಳು  https://karresults.nic.in/ ವೆಬ್‌ಸೈಟ್‌ನಲ್ಲಿ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು. ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್‌ ಸಂಖ್ಯೆಗೆ ಕೂಡ ಫಲಿತಾಂಶ ಕಳುಹಿಸಲಾಗುವುದು ಎಂದು ಇಲಾಖೆ ತಿಳಿಸಿದೆ.