ತ್ರಿಶಾ ಕ್ಲಾಸಸ್: ದ್ವಿತೀಯ ಪಿ.ಯು. ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸಿ.ಎಸ್.ಇ.ಇ.ಟಿ ಪುನಶ್ಚೇತನ ಕಾರ್ಯಕ್ರಮ.

ಮಂಗಳೂರು: ಸಿ.ಎ ಸಿ.ಎಸ್ ಮೊದಲಾದ ವೃತ್ತಿಪರ ಕೋರ್ಸ್‌ಗಳಿಗಾಗಿ ತರಬೇತಿ ನೀಡುತ್ತಿರುವ ತ್ರಿಶಾ ಕ್ಲಾಸಸ್ ವತಿಯಿಂದ ನೂತನ ಸಿ.ಎಸ್.ಇ.ಇ.ಟಿ ವಿದ್ಯಾರ್ಥಿಗಳಿಗೆ ಪುನಶ್ಚೇತನ ಕಾರ್ಯಕ್ರಮವನ್ನು ಮಂಗಳೂರಿನ ತ್ರಿಶಾ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಜ್ಯೋತಿ ಬೆಳಗಿಸುವ ಮೂಲಕ ಈ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಈ ಕಾರ್ಯಕ್ರಮದಲ್ಲಿ ತ್ರಿಶಾ ಕಾಲೇಜ್ ಆಫ್ ಕಾಮರ್ಸ್‌ ಅಂಡ್ ಮ್ಯಾನೇಜ್ಮೆಂಟ್ ನ ಪ್ರಾಂಶುಪಾಲರಾದ ಪ್ರೊ. ಮಂಜುನಾಥ್‌ ಕಾಮತ್ ಎಮ್ ಅವರು ಸಿ. ಎಸ್. ತರಬೇತಿ ಪಡೆಯುವ ವಿದ್ಯಾರ್ಥಿಗಳಿಗೆ ಸಿ. ಎಸ್. ಇ.ಇ.ಟಿ ಕೋರ್ಸಿನ ಬಗ್ಗೆ ಮತ್ತು ಪರೀಕ್ಷಾಪೂರ್ವ ತಯಾರಿಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ತ್ರಿಶಾ ಕ್ಲಾಸಸ್ ಮಂಗಳೂರು ಕೇಂದ್ರದ ಮುಖ್ಯಸ್ಥೆಯಾದ ಶ್ರೀಮತಿ ಯಶಸ್ವಿನಿ ಯಶ್ ಪಾಲ್, ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿವಾನಿ ಶೆಣೈ ಸ್ವಾಗತಿಸಿ ನಿರೂಪಿಸಿದರು. ಆದಿತ್ಯ ಜೆ. ಶೆಟ್ಟಿ ವಂದಿಸಿದರು.