ಧರ್ಮಸ್ಥಳ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಬಾಜೆ ಗ್ರಾಮದಲ್ಲಿ ಯುವತಿಗೆ ವಿದ್ಯುತ್ ಶಾಕ್ ತಗಲಿ ಸಾವನ್ನಪ್ಪಿದ ಘಟನೆ ಜೂ.27 ರಂದು ಸಂಜೆ ಸಂಭವಿಸಿದೆ.
ಮೃತರನ್ನು ಶಿಬಾಜೆ ಗ್ರಾಮದ ಬರ್ಗುಳ ನಿವಾಸಿ ಗಣೇಶ್ ಶೆಟ್ಟಿ ಮತ್ತು ರೋಹಿಣಿ ದಂಪತಿ ಪುತ್ರಿ ಪ್ರತೀಕ್ಷಾ ಶೆಟ್ಟಿ ಎಂದು ಗುರುತಿಸಲಾಗಿದೆ.
ಮನೆಗೆ ಬಂದಿದ್ದ ಪಾರ್ಸೆಲ್’ನ್ನು ಪಡೆಯಲು ರಸ್ತೆಗೆ ಬಂದಾಗ ನೀರಿನಲ್ಲಿದ್ದ ಸ್ಟೇ ವಯರ್ ಸ್ಪರ್ಶಿಸಿ ಯುವತಿ ಸಾವನ್ನಪ್ಪಿದ್ದಾಳೆ. ಸ್ಥಳದಲ್ಲಿದ್ದ ತಂದೆ ಅವರನ್ನು ರಕ್ಷಿಸಲು ಪ್ರಯತ್ನಿಸಿದಾಗ ತಂದೆಗೂ ವಿದ್ಯುತ್ ಆಘಾತವಾಗಿದ್ದು, ಆದರೆ ಪುತ್ರಿಯನ್ನು ರಕ್ಷಿಸಲು ಸಾಧ್ಯವಾಗಿಲ್ಲ.
ಸ್ಟೇ ವೈಯರ್ ಗೆ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಅದು ನೀರಿಗೆ ಪ್ರವಹಿಸಿದೆ. ಆ ಪರಿಣಾಮ ವಿದ್ಯುತ್ ಶಾಕ್ ಹೊಡೆದಿದೆ. ಪ್ರತೀಕ್ಷಾ ಶೆಟ್ಟಿ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತಂದರೂ, ಅದಾಗಲೆ ಮೃತಪಟ್ಟಿರುವ ಬಗ್ಗೆ ವೈದ್ಯರು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.
ಮೃತಪಟ್ಟ ಯುವತಿ ಕೊಕ್ಕಡ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದರು.