Home » ಧಾರಾಕಾರ ಮಳೆ: ನಾಳೆ (ಜು. 20) ದ.ಕ. ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.
ಧಾರಾಕಾರ ಮಳೆ: ನಾಳೆ (ಜು. 20) ದ.ಕ. ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.
ಮಂಗಳೂರು, ಜು. 19: ಕರಾವಳಿಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜುಲೈ 20ರಂದು ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿ ಆದೇಶಿಸಿದೆ.