ನಗರಸಭೆ ವತಿಯಿಂದ ನಿಷೇಧಿತ ಪ್ಲಾಸ್ಟಿಕ್ ವಶ

ಉಡುಪಿ: ಉಡುಪಿ ನಗರಸಭೆಯ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ತಡೆಗಟ್ಟುವ ನಿಟ್ಟಿನಲ್ಲಿ ನಗರಸಭೆಯ ವತಿಯಿಂದ ನಿರಂತರ ಕಾರ್ಯಾಚರಣೆ ನಡೆಯುತ್ತಿದ್ದು, ಮಂಗಳವಾರ ನಗರದ ಸಿಟಿ ಬಸ್ ನಿಲ್ದಾಣ ಸಮೀಪದ ಮಾರ್ಕೆಟಿಂಗ್ ಉದ್ದಿಮೆಯೊಂದರಲ್ಲಿ ೪೧೫ ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ಅನ್ನು ವಶಕ್ಕೆ ಪಡೆದು ರೂ. ೫೦೦೦ದಂಡ ವಿಧಿಸಲಾಯಿತು.ಕಾರ್ಯಾಚರಣೆಯಲ್ಲಿ ನಗರಸಭೆಯ ಪರಿಸರ ಅಭಿಯಂತರರಾದ ಸ್ನೇಹ ಕೆ.ಎಸ್, ಪ್ರಭಾರ ಆರೋಗ್ಯ ನಿರೀಕ್ಷಕ ಸುರೇಂದ್ರ ಹೋಬಳಿದಾರ್, ಸೂಪರ್ ವೈಸರ್‌ಗಳಾದ ಭೋಜನಾಯ್ಕ್, ಸುರೇಶ್ ಶೆಟ್ಟಿ, ನಾಗರ್ಜುನ್ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.