ಮಂಗಳೂರು: ದಕ್ಷಿಣ ಕನ್ನಡದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾದ್ಯಂತ ನಾಳೆ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜುಲೈ 09ರಂದು ರಜೆ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ರೆಡ್ ಆಲರ್ಟ್ ಘೋಷಣೆಯಾಗಿರುವ ಹಿನ್ನೆಲೆ ಮುನ್ನಚ್ಚರಿಕಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.