ನಾಳೆ ಪೆರ್ಡೂರು ಶ್ರೀಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ: ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಬದಲಿ ಮಾರ್ಗದಲ್ಲಿ ಸಂಚರಿಸಲು ಅಧಿಸೂಚನೆ

ಉಡುಪಿ, ಮಾರ್ಚ್ 15: ಪೆರ್ಡೂರು ಶ್ರೀಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆಯ ಹಿನ್ನೆಲೆಯಲ್ಲಿ ರಾ.ಹೆ.169(ಎ) ರ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಮಾರ್ಚ್ 16 ರಂದು ಸಂಜೆ 4 ಗಂಟೆಯಿ೦ದ ರಾತ್ರಿ 10 ಗಂಟೆಯವರೆಗೆ ವಾಹನಗಳಿಗೆ ಈ ಕೆಳಗಿನಂತೆ ಬದಲಿ ಮಾರ್ಗದಲ್ಲಿ ಸಂಚರಿಸಲು ಅಧಿಸೂಚನೆ ಹೊರಡಿಸಲಾಗಿದೆ.

ರಾ.ಹೆ.169(ಎ)ರಲ್ಲಿ ಉಡುಪಿಯಿಂದ ಹೆಬ್ರಿ, ಆಗುಂಬೆ ಕಡೆಗೆ ಹೋಗುವ ವಾಹನಗಳಿಗೆ ಹಿರಿಯಡ್ಕ ಜಂಕ್ಷನ್ ನಲ್ಲಿ ಮಾರ್ಗ ಬದಲಾಯಿಸಿ ಕೋಟ್ನಾಕಟ್ಟೆ-ಹರಿಖಂಡಿಗೆ-ಬೈರ೦ಪಳ್ಳಿ-ಪೆರ್ಡೂರು-ಮೇಟೆ ಮಾರ್ಗವಾಗಿ ಅಥವಾ ಹಿರಿಯಡ್ಕ ಬಜೆ, ಕುಕ್ಕೆಹಳ್ಳಿ, ಪೇತ್ರಿ ಮಾರ್ಗವಾಗಿ ಹೆಬ್ರಿ ಆಗುಂಬೆಗೆ ಸಂಚರಿಸಬೇಕು. ರಾ.ಹೆ.169(ಎ) ರಲ್ಲಿ ಆಗುಂಬೆ-ಹೆಬ್ರಿಯಿ೦ದ ಉಡುಪಿ ಕಡೆಗೆ ಬರುವ ವಾಹನಗಳಿಗೆ ಪೆರ್ಡೂರು ಮೇಲ್ನೋಟೆ-ಬೈರಂಪಳ್ಳಿ ಹರಿಖಂಡಿಗೆ-ಕೋಟ್ನಾಕಟ್ಟೆ-ಹಿರಿಯಡ್ಕ ಜಂಕ್ಷನ್ ಮಾರ್ಗವಾಗಿ ಉಡುಪಿಗೆ ಸಂಚರಿಸಬೇಕು. ರಾ.ಹೆ 169(ಎ) ರಲ್ಲಿ ಹೆಬ್ರಿಯಿಂದ ಪೆರ್ಡೂರು ಮಾರ್ಗವಾಗಿ ಪೇತ್ರಿ-ಬ್ರಹ್ಮಾವರ ಕಡೆಗೆ ಹೋಗುವ ವಾಹನಗಳಿಗೆ ಪೆರ್ಡೂರು ಮೇಲೇಟೆಯ ಆರ್.ಎಸ್.ಎಸ್ ಬ್ಯಾಂಕ್ ಬಳಿ ಇರುವ ಅಲಂಗಾರು ರಸ್ತೆಯ ಮಾರ್ಗವಾಗಿ ಕರ್ಜೆ, ಪೇತ್ರಿ, ಬ್ರಹ್ಮಾವರಕ್ಕೆ ಸಂಚರಿಸಬೇಕು ಎಂದು ಹಾಗೂ ಮಾರ್ಚ್ 16 ರ ಸಂಜೆ 4 ಗಂಟೆಯಿ೦ದ ರಾತ್ರಿ 10 ಗಂಟೆಯವರೆಗೆ ಪೆರ್ಡೂರು ಕೆಳಪೇಟೆಯಿಂದ ಮೇಲ್ಪೇಟೆಯ ಯ ಬಸ್ ನಿಲ್ದಾಣದವರೆಗೆ ವಾಹನ ಸಂಚಾರ ಮುಕ್ತಗೊಳಿಸುವುದು ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಚಿತ್ರ: ಪ್ರಸನ್ನ ಪೆರ್ಡೂರು