ಪೆರ್ಡೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ.

ಪೆರ್ಡೂರು: ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ವರದಿಯಾಗಿದೆ.

ನಯನ(17) ಎಂಬುವವರು ಉಡುಪಿ ಜಿಲ್ಲೆಯ ಪೆರ್ಡೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದವರು.

ಜುಲೈ 22 ರಂದು ಬೆಳಿಗ್ಗೆ ಯಾವುದೋ ತನ್ನ ವೈಯುಕ್ತಿಕ ಕಾರಣದಿಂದ ಅಥವಾ ಇನ್ನಾವುದೋ ಕಾರಣದಿಂದ ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಉಪ್ಪರಿಗೆ ಮಾಡಿನ ಜಂತಿಗೆ ಚೂಡಿದಾರ ಶಾಲನ್ನು ಬಿಗಿದು ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.