ಬಂಟಕಲ್ ತಾಂತ್ರಿಕ ವಿದ್ಯಾಲಯದಲ್ಲಿ ವಿಟಿಯು ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿ: ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ‌ ತಂಡಕ್ಕೆ ಪ್ರಶಸ್ತಿ.

ಬಂಟಕಲ್: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಇದರ 2025ನೇ ಸಾಲಿನ ಮಂಗಳೂರು ವಲಯ ಮಟ್ಟದ ತಾಂತ್ರಿಕ ಮಹಾವಿದ್ಯಾಲಯಗಳ ಪುರುಷರ ವಾಲಿಬಾಲ್ ಪಂದ್ಯಾವಳಿಯು ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ
ತಾಂತ್ರ‍್ರಿಕ ಮಹಾವಿದ್ಯಾಲಯದಲ್ಲಿ 22 ಮತ್ತು 23 ಎಪ್ರಿಲ್ 2025 ರಂದು ನಡೆಯಿತು.

ದಿನಾಂಕ 23 ಎಪ್ರಿಲ್ 2025 ರಂದು ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ವಹಿಸಿ ಮಾತನಾಡಿ ಕ್ರೀಡೆಯ ಮಹತ್ವದ ಬಗ್ಗೆ ತಿಳಿಸಿದರು.

ಪಂದ್ಯಾವಳಿಯಲ್ಲಿ ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ, ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದರೆ, ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳು ತೃತೀಯ ಸ್ಥಾನ
ಪಡೆದರು.

ಪಂದ್ಯದಲ್ಲಿ ವಿಜೇತರಾದವರಿಗೆ ಸಂಸ್ಥೆಯ ಪ್ರಾಂಶುಪಾಲರಾದ
ಡಾ. ತಿರುಮಲೇಶ್ವರ ಭಟ್ ಇವರು ಬಹುಮಾನ ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಿದರು. ಈ ಸಮಾರೋಪ ಸಮಾರಂಭದಲ್ಲಿ ಸಂಸ್ಥೆಯ ಉಪ ಪ್ರಾಂಶುಪಾಲರಾದ ಡಾ. ಗಣೇಶ್ ಐತಾಳ್, ಡೀನ್‌ಗಳು, ವಿವಿಧ ವಿಭಾಗದ
ಮುಖ್ಯಸ್ಥರು, ದೈಹಿಕ ಶಿಕ್ಷಣ ನಿರ್ದೇಶಕರು ಮತ್ತು ವಿವಿಧ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರು ಭಾಗವಹಿಸಿದ್ದರು.