ಉಡುಪಿ: ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 2024-25ನೇ ಸಾಲಿನ ವರ್ಣೋತ್ಸವ–2025 ಮತ್ತು ವಾರ್ಷಿಕ ಸಮಾರಂಭವು ಮಾರ್ಚ್ 20 ರಿಂದ ಮಾರ್ಚ್ 23ವರೆಗೆ ಕಾಲೇಜಿನ ಆವರಣದಲ್ಲಿ ನಡೆಯಲಿದೆ ಎಂದು ಸೋದೆ ಎಜ್ಯುಕೇಶನ್ ಟ್ರಸ್ಟ್ ಕಾರ್ಯದರ್ಶಿ ರತ್ನಕುಮಾರ್ ಅವರು ಹೇಳಿದರು.
ಅವರು ಮಾ.19 ರಂದು ಕಾಲೇಜಿನ ಸಭಾ ಭವನದಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಮಾಹಿತಿ ನೀಡಿದರು.

ಮಾರ್ಚ್ 20ರಂದು ಬೆಳಗ್ಗೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಬೆಳಿಗ್ಗೆ 9-30ಕ್ಕೆ ನಡೆಯಲಿದ್ದು, ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನ ಇದರ ಉಪಾಧ್ಯಕ್ಷರಾದ ಶ್ರೀನಿವಾಸ ತಂತ್ರಿಗಳು ಸಮಾರಂಭವನ್ನು ಉದ್ಘಾಟಿಸಲಿದ್ದಾರೆ ಎಂದರು.
ನಮ್ಮ ಸಂಸ್ಥೆಯ ಹಳೆ ವಿದ್ಯಾರ್ಥಿಗಳಾದ ಪವನ್ಕುಮಾರ್ ಶೆಟ್ಟಿ, ಮ್ಯುಸಿಕ್ ಟಿಬಿಒಎಸ್ಎಮ್ ನ ಹಿರಿಯ ಪ್ರಾಧ್ಯಾಪಕಿ ಉಷಾ ರಾಮಚಂದ್ರ ಭಟ್ ಮೊದಲಾದವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿಗಳಾದ ರತ್ನಕುಮಾರ್ ವಹಿಸಲಿದ್ದಾರೆ.

ವರ್ಣೋತ್ಸವ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯದ ವಿವಿಧ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದರು.
ತಾಂತ್ರಿಕ ಸ್ಪರ್ಧೆಗಳ ಜೊತೆಗೆ ಗಾಯನ, ಫೋಟೋಗ್ರಫಿ, ಚಿತ್ರಕಲೆ, ಮುಖವರ್ಣ ಸ್ಪರ್ಧೆ, ನೃತ್ಯ, ನಡೆಯಲಿರುವುದು. ಸಂಜೆ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮ ನಡೆಯಲಿದೆ.
ವರ್ಣೋತ್ಸವದ ಸಮಾರೋಪ:
ವರ್ಣೋತ್ಸವದ ಸಮಾರೋಪ ಸಮಾರಂಭವು ಶುಕ್ರವಾರ ಮಾರ್ಚ್ 21ರಂದು ಸಂಜೆ ನಡೆಯಲಿದೆ. ಸಮಾರಂಭದಲ್ಲಿ ಬೆಂಗಳೂರಿನ ಉದ್ಯಮಿ ವಿನೋದ್ಜಾನ್, ಖ್ಯಾತ ಚಲನ ಚಿತ್ರ ನಟ ಪೃಥ್ವಿಅಂಬರ್ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪರಮಪೂಜ್ಯ ಶ್ರೀ ಸೋದೆ ಶ್ರೀಪಾದರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಆ ದಿನ ಸಂಜೆ ಕಾಲೇಜಿನ ಯಕ್ಷಗಾನ ಸಂಘ “ಯಕ್ಷಸಿಂಚನ”ದ ವಿದ್ಯಾರ್ಥಿಗಳಿಂದ 3 ಗಂಟೆಯ ಕಾಲ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಮಾರ್ಚ್ ರಂದು 22 ಕಾಲೇಜು ವಾರ್ಷಿಕೋತ್ಸವ ಸಮಾರಂಭವು ಸಂಸ್ಥೆಯ ಆವರಣದಲ್ಲಿ ಪರಮಪೂಜ್ಯ ಸೋದೆ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮಧ್ಯಾಹ್ನ 3.00 ಗಂಟೆಗೆ ಸಭಾ ಕಾರ್ಯಕ್ರಮದೊಂದಿಗೆ ಸಮಾರಂಭವು ಸಂಜೆ ಕಾಲೇಜಿನ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಮಾಪನಗೊಳ್ಳಲಿದೆ ಎಂದರು.
ವಿವಿಧ ಕ್ಷೇತ್ರದ ಅತಿಥಿ ಗಣ್ಯರು:
ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಮಂಡಳಿಯ ನಿರ್ದೇಶಕರಾದ ಡಾ. ಎನ್. ಹೆಚ್. ಸಿದ್ದಲಿಂಗ ಸ್ವಾಮಿಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ಐಟಿ ಕಂಪೆನಿ ಡಾಟಾ ಪ್ಯಾಟರ್ನ್ಸ್ ಲಿಮಿಟೆಡ್ ಇದರ ಮುಖ್ಯಸ್ಥರು ಮತ್ತು ನಿರ್ದೇಶಕರಾದ ಶ್ರೀನಿವಾಸ ಗೋಪಾಲನ್ ರಂಗರಾಜನ್ ಮತ್ತು ಶ್ರೀಮತಿ ರೇಖಾಮೂರ್ತಿ ರಂಗರಾಜನ್ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶ್ರೀ ಮೂಡಬಿದ್ರಿಯ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕಚಾರು ಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರು ಈ ಸಮಾರಂಭಕ್ಕೆ ವಿಶೇಷ ಅತಿಥಿಗಳಾಗಿ ಆಗಮಿಸಿ ಆಶೀರ್ವಚನ ನೀಡಲಿದ್ದಾರೆ.
ಭಾನುವಾರ ಮಾರ್ಚ್ 23 ರಂದು ಬೆಳಿಗ್ಗೆ 10-00 ರಿಂದ “ಆಟೋಎಕ್ಸ್ಪೋ” ದುಬಾರಿ ವಾಹನಗಳ ಪ್ರದರ್ಶನ ಮತ್ತು ಮದ್ಯಾಹ್ನ 3 ಗಂಟೆಗೆ ಹಳೆ ವಿದ್ಯಾರ್ಥಿಗಳ ಸಮಾವೇಶ ಸಮಾರಂಭ ನಡೆಯಲಿದೆ. ಸಂಜೆ 7 ಗಂಟೆಗೆ ಕೇರಳದ ಪ್ರತಿಷ್ಟಿತ ಮ್ಯುಸಿಕಲ್ ಬ್ಯಾಂಡ್ ಸಂಸ್ಥೆಯಾದ “ತಮರಶ್ಶೇರಿಚೂರಂ” ತಂಡದಿಂದ ಸಂಗೀತ ರಸಮಂಜರಿ ಮನೋರಂಜನಾ ಕಾರ್ಯಕ್ರಮ ಜರಗಲಿದೆ ಎಂದು ರತ್ನಕುಮಾರ್ ಅವರು ಮಾಹಿತಿ ನೀಡಿದರು. ಸುದ್ದಿಗೋಷ್ಟಿಯಲ್ಲಿ ಸಂಸ್ಥೆಯ ಪ್ರಾಂಶುಪಾಲ ಡಾ. ತಿರುಮಲೇಶ್ವರ ಭಟ್, ಸಂಯೋಜಕರಾದ ಸಚಿನ್ ಪ್ರಭು, ಡಾ. ಶಿಲ್ಪಾ ಕಾಮತ್ ಉಪಸ್ಥಿತರಿದ್ದರು.












