ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿಗೆ ಡಾ. ತುಕರಾಂ ಪೂಜಾರಿ ಬಂಟ್ವಾಳ ಮತ್ತು ಗೋಪು ಮಡಿವಾಳ ಅಲೆವೂರು ಆಯ್ಕೆ

ಉಡುಪಿ: ಬನ್ನಂಜೆ ಬಾಬು ಅಮೀನ್ ಜಾನಪದ ವಿದ್ವಾಂಸ ಪ್ರಶಸ್ತಿಗೆ ಜಾನಪದ ವಿದ್ವಾಂಸ ಡಾ. ತುಕರಾಂ ಪೂಜಾರಿ ಬಂಟ್ವಾಳ ಹಾಗೂ ಜಾನಪದ ಕಲಾವಿದ ಪ್ರಶಸ್ತಿಗೆ ದೈವಾರಾಧನೆಯ ಸೇವಕ ಗೋಪು ಮಡಿವಾಳ ಅಲೆವೂರು ಅವರು ಆಯ್ಕೆಯಾಗಿದ್ದಾರೆ‌.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಸಂಚಾಲಕ ಭಾಸ್ಕರ ಸುವರ್ಣ ಅವರು, ಯುವವಾಹಿನಿ ಉಡುಪಿ ಘಟಕದ ಆಶ್ರಯದಲ್ಲಿ ಇದೇ ಮಾ. 15ರಂದು ಸಂಜೆ 4.30ಕ್ಕೆ ಉಡುಪಿ ಚಿಟ್ಟಾಡಿಯ ಲಕ್ಷ್ಮೀ ಟ್ರೇಡ್ ಸೆಂಟರ್‌ನ ಲಕ್ಷ್ಮೀ ಸಭಾಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

ಪ್ರಶಸ್ತಿಯು ತಲಾ 12000 ಸಾವಿರ ನಗದು, ಪ್ರಶಸ್ತಿ ಫಲಕ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಉಡುಪಿ ತುಳುಕೂಟದ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ಕುಳೂರು ಹಾಗೂ ಅದಿತಿ ಬಿಲ್ಡರ್ಸ್ ಉಡುಪಿ ಇದರ ಪ್ರವರ್ತಕ ರಂಜನ್ ಕೆ ಭಾಗವಹಿಸಲಿದ್ದಾರೆ. ಹಾಗೂ 2021ನೇ ಸಾಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ವಿದ್ವಾಂಸರಾದ ಶ್ರೀ ಬನ್ನಂಜೆ ಬಾಬು ಅಮೀನ್ ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷ ದಯಾನಂದ ಕರ್ಕೇರ, ಬನ್ನಂಜೆ ಬಾಬು ಅಮೀನ್, ರಘುನಾಥ್, ಸಂತೋಷ್ ಕುಮಾರ್ ಇದ್ದರು.