ಉಡುಪಿ: ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಕಂಡು ತುಂಬ ಖೇದವಾಗಿದೆ. ಇಡೀ ಹಿಂದೂ ಸಮಾಜ ಜಾಗೃತವಾಗಬೇಕು ಮತ್ತು ವಿಶ್ವಶಾಂತಿಗಾಗಿ ದೇವರಿಗೆ ಮೊರೆಯಿಡುವುದಷ್ಟೆ ನಮ್ಮ ಮುಂದಿವರು ಆಯ್ಕೆ ಎಂದು ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹೇಳಿದರು.
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ವಿಡಿಯೋ ಮೂಲಕ ಕಳವಳ ವ್ಯಕ್ತಪಡಿಸಿರುವ ಶ್ರೀಪಾದರು, ನಮ್ಮ ದೇಶದಲ್ಲಿರುವ ಎಲ್ಲ ಹಿಂದೂಗಳು ಕೂಡ ಅತ್ಯಂತ ಕಳವಳ ಪಡಬೇಕಾದ ಸ್ಥಿತಿಯಿದು. ಇವತ್ತು ಪಕ್ಕದ ದೇಶದಲ್ಲಿ ಅಷ್ಟ ಅಲ್ಲದೆ ಸ್ವದೇಶದಲ್ಲೂ ಹಿಂದೂಗಳ ಮೇಲಿನ ಆಕ್ರಮಣ ಅತಿಯಾಗಿದೆ. ಅದರ ವಿರುದ್ಧವಾಗಿ ಸೊಲ್ಲೆತ್ತುವವರನ್ನು ಕೂಡ ದಮನಿಸುವ ಪ್ರವೃತ್ತಿಯನ್ನು ಕಾಣುತ್ತಿದ್ದೇವೆ.
ಈ ನೆಲೆಯಲ್ಲಿ ಸಮಾಜದ ಎಲ್ಲರೂ ಜಾಗೃತರಾಬೇಕು. ಸರಕಾರವನ್ನು ಕೂಡ ಆಶ್ರಯಿಸುವ ಹಂತದಲ್ಲಿಲ್ಲ. ದೇವರಿಗೆ ಶರಣಾಗಿ ಸಮಾಜ, ದೇಶ, ವಿಶ್ವದಲ್ಲಿ ಶಾಂತಿ, ಸುಭಿಕ್ಷೆ ನೆಲೆಸುವಂತೆ ಬೇಡೋಣ ಎಂದು ಕರೆ ಕೊಟ್ಟಿದ್ದಾರೆ.ದಮನಕಾರಿ ಪ್ರವೃತ್ತಿ ವಿರುದ್ಧ ಹಿಂದೂ ಸಮಾಜ ಜಾಗೃತವಾಗಬೇಕು