ಉಡುಪಿ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಕಳವಳಕಾರಿಯಾಗಿದ್ದು,ಇದರಲ್ಲಿ ಅಂತಾರಾಷ್ಟ್ರೀಯ ಪಿತೂರಿ ಇರುವ ಸಾಧ್ಯತೆಯಿದೆ. ಈ ಸಮಸ್ಯೆಗೆ ಮೂಲ ಕಾರಣವೇನು ಎಂಬುದನ್ನು ತಿಳಿದುಕೊಳ್ಳಬೇಕು. ಜತೆಗೆ ಅದಕ್ಕೆ ಪರಿಹಾರ ಕಲ್ಪಿಸುವುದು ಮತ್ತು ವಿದೇಶಗಳಲ್ಲಿರುವ ಹಿಂದೂಗಳ ರಕ್ಷಣೆಗೆ ಕೇಂದ್ರ ಸರಕಾರ ದಿಟ್ಟ ನಿಲುವು ತೆಗೆದುಕೊಳ್ಳುವ ಅಗತ್ಯವಿದೆ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದ್ದಾರೆ.
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ಕಳವಳ ವ್ಯಕ್ತಪಡಿಸಿರುವ ಶ್ರೀಪಾದರು, ಬಾಂಗ್ಲಾದ ಘಟನೆಗಳನ್ನು ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ವಿಶ್ವಾದ್ಯಂತ ಹಿಂದೂಗಳ ಮೇಲೆ ಆಕ್ರಮಣಕಾರಿ ದಬ್ಬಾಳಿಕೆಗಳು ನಡೆಯುತ್ತಿವೆ. ಈ ಬಗ್ಗೆ ನಾವೇನಾದರೂ ಮಾಡಲೇಬೇಕು ಎನಿಸುತ್ತಿದೆ. ಕಾಶ್ಮೀರದಲ್ಲಿ ಹಿಂದೆ ಏನು ನಡೆದಿತ್ತೋ ಅದನ್ನೇ ಈಗ ನಾವು ಬಾಂಗ್ಲಾದಲ್ಲಿ ನೋಡುತ್ತಿದ್ದೇವೆ. ಬೇರೆ ದೇಶಗಳಲ್ಲೂ ಇಂಥದ್ದೇ ಘಟನೆಗಳು ಆರಂಭವಾಗಿವೆ.ಇದೊಂದು ಅಂತಾರಾಷ್ಟ್ರೀಯ ಪಿತೂರಿಯಾಗಿದೆ. ಇದರ ವಿರುದ್ಧ ಕೇಂದ್ರ ಸರಕಾರ ದಿಟ್ಟ ಹೆಜ್ಜೆ ಇಡಬೇಕು ಎಂದಿದ್ದಾರೆ.