ಬಾರ್ಕೂರು: ಬಾರ್ಕೂರು ವಿದ್ಯಾಭಿವರ್ಧಿನಿ ಸಂಘದ ಆಡಳಿತಕ್ಕೊಳಪಟ್ಟ ನೇಶನಲ್ ಕೈಗಾರಿಕಾ ತರಬೇತಿ ಸಂಸ್ಥೆಯು ವಿದ್ಯಾರ್ಥಿಗಳಿಗೆ ಉತ್ತಮ ಉದ್ಯೋಗವನ್ನು ಕೊಡಿಸುವ ಬಗ್ಗೆ ಚಿಂತನೆ ನಡೆಸಿ ಪ್ರತಿ ವರ್ಷ ಹಲವು ಕಂಪನಿಗಳಿಂದ ಕ್ಯಾಂಪಸ್ ಸಂದರ್ಶನ ಮಾಡುತ್ತಾ ಬಂದಿರುತ್ತದೆ.
ಮೇ 20 ಮತ್ತು 21 ರಂದು ಪ್ರತಿಷ್ಠಿತ ಕಂಪನಿಯಾದ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಪ್ರೈ.ಲಿ. ಅವರಿಂದ ಕ್ಯಾಂಪಸ್ ಸಂದರ್ಶನ ಇರುತ್ತದೆ. ಅರ್ಹ ವಿದ್ಯಾರ್ಥಿಗಳು ಇದನ್ನು ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಬಾರಕೂರು ನ್ಯಾಶನಲ್ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.