ಕೊಡವೂರು: ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಸಾಮಾಜಿಕ ಸಮ್ಮೇಳನ ಮತ್ತು ಪದಗ್ರಹಣ ಕಾರ್ಯಕ್ರಮವನ್ನು ಜಿಲ್ಲಾಧ್ಯಕ್ಷರಾದ ಕಿಶೋರ್ ಕುಮಾರ್ ಕುಂದಾಪುರ ಕೊಡವೂರು ರವರು ಉದ್ಘಾಟಿಸಿದರು.
ಸಭೆಯನ್ನು ಉದ್ಧೇಶಿಸಿ ಮಾತನಾಡಿದ ವಿಜಯ್ ಕೊಡವೂರು, ಹಿಂದುಳಿದ ವರ್ಗಕ್ಕೆ ಭಾರತೀಯ ಜನತಾ ಪಕ್ಷ ಶ್ರೀ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರವು ಹಿಂದುಳಿದ ವರ್ಗಗಳಿಗೆ ನೀಡಿದ ಕೊಡುಗೆಗಳ ಕುರಿತು ಮಾಹಿತಿಯನ್ನು ನೀಡಿದರು.
ಉಡುಪಿ ಲೋಕ ಸಭಾ ಕ್ಷೇತ್ರದ ಅಭಿವೃದ್ಧಿ ಜೊತೆಗೆ ಚತುಷ್ಪಥ ಹೆದ್ದಾರಿ ಮೆಟ್ರೋ ರೈಲು ಇತ್ಯಾದಿ ಜನಪರ ಕಾರ್ಯಕ್ರಮಗಳ ಕುರಿತು ತಿಳಿಸಿದರು.
ಲೋಕಸಭಾ ಚುನಾವಣೆಯ ನಿಟ್ಟಿನಲ್ಲಿ ಕಾರ್ಯಕರ್ತರೆಲ್ಲರೂ ತಮ್ಮ ಕ್ಷೇತ್ರಗಳಿಗೆ ಹೋಗಿ, ಮತದಾರರಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡುವಂತೆ ಪ್ರೇರಣೆ ನೀಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ-ಚಿಕ್ಕಮಗಳೂರು ಲೋಕ ಸಭಾ ಅಭ್ಯರ್ಥಿ ಶ್ರೀ ಕೋಟ ಶ್ರೀನಿವಾಸ್ ಪೂಜಾರಿ ಅವರು ಜಿಲ್ಲಾಧ್ಯಕ್ಷರಾದ ಶ್ರೀ ಕಿಶೋರ್ ಕುಮಾರ್ ಕುಂದಾಪುರ, ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಶ್ರೀ ಐರೋಡಿ ವಿಠ್ಠಲ ಪೂಜಾರಿ, ಶಾಸಕರಾದ ಶ್ರೀ ಯಶಪಾಲ್ ಸುವರ್ಣ, ವಿಭಾಗದ ಸಹ ಪ್ರಭಾರಿಗಳಾದ ಶ್ರೀ ಉದಯ ಕುಮಾರ್ ಶೆಟ್ಟಿ, ಉಡುಪಿ ಪ್ರಭಾರಿಗಳಾದ ಶ್ರೀ ಅರುಣ್ ಬಾಣ,ಜಿಲ್ಲಾ ಉಪಾಧ್ಯಕ್ಷರಾದ ಕಿರಣ ಕುಮಾರ್,ಚುನಾವಣಾ ಜಿಲ್ಲಾ ಸಂಚಾಲಕರಾದ ಶ್ರೀ ಕುತ್ಯಾರ್ ನವೀನ್ ಶೆಟ್ಟಿ ,ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಮಾಧ್ಯಮ ಪ್ರಮುಖರಾದ ಶ್ರೀ ಶ್ರೀನಾಥ ರಾವ್,
ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸುರೇಂದ್ರ ಕುಲಾಲ್, ಶ್ರೀ ರವೀಂದ್ರ ತಿಂಗಳಾಯ ,
ಜಿಲ್ಲೆಯ ಪದಾಧಿಕಾರಿಗಳು,ಎಲ್ಲಾ ಮಂಡಲದ ಅಧ್ಯಕ್ಷರು ಮುಖಂಡರು ಸೇರಿದಂತೆ ಪಕ್ಷದ ಹಲವಾರು ಪ್ರಮುಖರು , ಕಾರ್ಯಕರ್ತರು ಉಪಸ್ಥಿತರಿದ್ದರು.
ಇದೆ ಸಂಧರ್ಭದಲ್ಲಿ ಪಕ್ಷಕ್ಕಾಗಿ ಹಗಲಿರುಳು ಅವಿರತವಾಗಿ ನಿಸ್ವಾರ್ಥವಾಗಿ ಶ್ರಮಿಸಿದ ಹಿಂದುಳಿದ ವರ್ಗಗಳ ಪ್ರಮುಖ ಹಿರಿಯರನ್ನು ಗೌರವಿಸಿ ಸನ್ಮಾನಿಸಲಾಯಿತು.