ಬೆಂಕಿ ಹೊತ್ತಿಕೊಂಡು ಧಗ ಧಗ ಉರಿದ ಸ್ಕೂಟರ್‌; ತಪ್ಪಿದ ಭಾರೀ ಅನಾಹುತ

ಉಡುಪಿ: ಪೆಟ್ರೋಲ್ ಲೀಕ್ ಆಗಿ ಸ್ಕೂಟರ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ಉಡುಪಿಯ ಚಿಟ್ಪಾಡಿಯ ಪೆಟ್ರೋಲ್ ಪಂಪ್‌ ಬಳಿ ಸಂಭವಿಸಿದೆ.

ಪೆಟ್ರೋಲ್ ಪಂಪ್ ನಿಂದ ಬಾಟಲಿಯಲ್ಲಿ ಪೆಟ್ರೋಲ್ ತುಂಬಿಸಿದ ವ್ಯಕ್ತಿ ಬಳಿಕ ಪೆಟ್ರೋಲ್ ತುಂಬಿದ ಬಾಟಲಿಯನ್ನು ಸ್ಕೂಟರ್ ಢಿಕ್ಕಿಯ ಒಳಗೆ ಇರಿಸಿದ್ದರು. ಬಾಟಲಿಯ ಪೆಟ್ರೋಲ್ ಲೀಕ್ ಆಗಿ ಇಂಜಿನ್ ಗೆ ಬೆಂಕಿ ಹೊತ್ತಿಕೊಂಡಿದೆ. ತಕ್ಷಣವೇ ಸ್ಥಳೀಯ ಪೆಟ್ರೋಲ್‌ ಪಂಪ್‌ ಸಿಬ್ಬಂದಿ ಮತ್ತು ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಟ್ಟು ನಂದಿಸುವಲ್ಲಿ ಯಶಸ್ವಿಯಾದರು.
ಇವರ ಸಮಯಪ್ರಜ್ಞೆಯಿಂದಾಗಿ ನಡೆಯಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಘಟನೆ ನಡೆದ ಸ್ಥಳದಿಂದ ಕೆಲವೇ ಅಂತರದಲ್ಲಿ ಹಲವು ಬಸ್ ಮತ್ತು ಇತರ ವಾಹನಗಳನ್ನು ಪಾರ್ಕ್ ಮಾಡಲಾಗಿತ್ತು.