ಬೆಂಗಳೂರಿನಲ್ಲಿ ರಸ್ತೆ ಅಪಘಾತ: ಕಾರ್ಕಳ ಕುಕ್ಕುಂದೂರು ನಿವಾಸಿ ಮೃತ್ಯು.

ಕಾರ್ಕಳ: ಕುಕ್ಕುಂದೂರು ಗ್ರಾಮದ ಬಸ್ರಿ ನಿವಾಸಿ ಶಮನ್‌ ಶೆಟ್ಟಿ (21) ಅವರು ಬೆಂಗಳೂರಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಬೆಂಗಳೂರಿನ ರಾಮಯ್ಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಎ ಓದುತ್ತಿದ್ದ ಶಮನ್‌ ಡಿ. 10ರಂದು ರಾತ್ರಿ ಸುಮಾರು 11 ಗಂಟೆಗೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಹೋಗುತ್ತಿದ್ದಾಗ ಅವರ ಬೈಕ್‌ ಡಿವೈಡರ್‌ಗೆ ಢಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇವರು ಜಾರ್ಕಳ ಕುಕ್ಕುಂದೂರು ಬಸ್ರಿ ನಿವಾಸಿ ಸಿರಿಯಣ್ಣ ಶೆಟ್ಟಿಯವರ ಪುತ್ರ. ಮೃತರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.