ಬೆಳ್ತಂಗಡಿ: ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಂದಿಬೆಟ್ಟದಲ್ಲಿ ಕಾಲು ಜಾರಿ ಮನೆಯ ಕೆರೆಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಶೈಲೇಶ್ ಶೆಟ್ಟಿ(38) ಎಂದು ಗುರುತಿಸಲಾಗಿದೆ. ಕಳೆದ 6 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಇವರು ಕೃಷಿ ವೃತ್ತಿ ಮಾಡುತ್ತಿದ್ದರು. ತಮ್ಮ ಮನೆಯ ಕೆರೆಗೆ ರಾತ್ರಿ ಸುಮಾರು 8:30 ಕ್ಕೆ ಜಾರಿ ಬಿದ್ದು ಕೆಸರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿ, ಶೈಲೇಶ್ ಶವವನ್ನು ಮೇಲಕ್ಕೆತ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.