ಬೆಳ್ತಂಗಡಿ: ಉಜಿರೆ ಕಾಲೇಜಿನ ಯುವ ಪ್ರತಿಭೆ, ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಅಸೌಖ್ಯದಿಂದ ನ.12ರಂದು ನಿಧನ ಹೊಂದಿದ್ದರು.
ಮೃತಪಟ್ಟ ಯುವಕ ಮಂಡ್ಯ ಮೂಲದ ಚಿನ್ಮಯ ಗೌಡ ಪಿ.ಕೆ. (18). ಅವರು ಹಾಸ್ಟೆಲ್ನಲ್ಲಿ ವಾಸ್ತವ್ಯವಿದ್ದು, ಉಜಿರೆ ಖಾಸಗಿ ಕಾಲೇಜಿಗೆ ತೆರಳುತ್ತಿದ್ದರು. ಉತ್ತಮ ಕಬಡ್ಡಿ ಪಟುವಾಗಿದ್ದ ಅವರು ಕಾಲೇಜಿಗೆ ಹಲವಾರು ಪ್ರಶಸ್ತಿಗಳನ್ನು ಗಳಿಸಿಕೊಟ್ಟಿದ್ದರು. ಕಳೆದ ಕೆಲವು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಮಂಡ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಮಂಗಳವಾರ ಮೃತಪಟ್ಟರು. ಅವರು ತಂದೆ, ತಾಯಿಯನ್ನು ಅಗಲಿದ್ದಾರೆ.