ಕಟಪಾಡಿ:ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮ ದಿನಾಚರಣೆ

ಉಡುಪಿ: ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮದಿನಾಚರಣೆಯ ಪ್ರಯುಕ್ತ ಕಟಪಾಡಿ ಶ್ರೀವಿಶ್ವನಾಥ ಕ್ಷೇತ್ರದಲ್ಲಿ‌ ಇಂದು ಹಮ್ಮಿಕೊಂಡ ನಾರಾಯಣಗುರುಗಳ ಜಾಥಕ್ಕೆ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಚಾಲನೆ ನೀಡಿದರು.

Oplus_0

ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಿಂದ ಆರಂಭಗೊಂಡ ಜಾಥವು, ಕಟಪಾಡಿ ಪೇಟೆಯಾಗಿ ಸಾಗಿಬಂದು ರಾಷ್ಟ್ರೀಯ ಹೆದ್ದಾರಿ 66 ಕಲ್ಲಾಪು ಮಾರ್ಗವಾಗಿ ವಿಶ್ವನಾಥ ಕ್ಷೇತ್ರದಲ್ಲಿ ಸಮಾಪನಗೊಂಡಿತು.

Oplus_0

ಕಟಪಾಡಿ ವಿಶ್ವನಾಥ ಕ್ಷೇತ್ರ ಮತ್ತು ಶ್ರೀ ನಾರಾಯಣ ಗುರು ಸೇವಾದಳ ಜಂಟಿ ಆಶ್ರಯದಲ್ಲಿ ಈ ಜಾಥವನ್ನು ಆಯೋಜಿಸಲಾಗಿತ್ತು‌. ಸಂದೇಶ ಸಾರುವ ಈ ಜಾಥದಲ್ಲಿ ಬಿಲ್ಲವ ಮುಖಂಡರು, ವಿಶ್ವನಾಥ ಕ್ಷೇತ್ರದ ಆಡಳಿತ ಮಂಡಳಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಬಿಲ್ಲವ ಸಮಾಜ ಬಾಂಧವರು ಪಾಲ್ಗೊಂಡಿದ್ದರು.

Oplus_0