ಉಡುಪಿ: ಬ್ರಹ್ಮಾವರ ತಾಲೂಕಿನ ಶಿಶು ಅಭಿವೃದ್ಧಿ
ಯೋಜನೆಯಡಿ ಗ್ರಾಮ ಪಂಚಾಯತ್ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಯ 10 ಅಂಗನವಾಡಿ ಕಾರ್ಯಕರ್ತೆ ಹಾಗೂ 25 ಅಂಗನವಾಡಿ
ಸಹಾಯಕಿಯರ ಗೌರವಸೇವೆ ಹುದ್ದೆಗಳ ನೇಮಕಾತಿಗೆ ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರಿಂದ ವೆಬ್ಸೈಟ್
https://karnemakaone.kar.nic.in/abcd/ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟಂಬರ್ 19 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಬ್ರಹ್ಮಾವರ
ದೂ.ಸಂಖ್ಯೆ: 0820-2562244 ಅನ್ನು ಸಂಪರ್ಕಿಸಬಹುದಾಗಿದೆ ಎಂದು
ಪ್ರಕಟಣೆ ತಿಳಿಸಿದೆ.