ಉಡುಪಿ: ಬ್ರಹ್ಮಾವರ ತಾಲೂಕಿನ ಬಾರ್ಕೂರು ನಿವಾಸಿ ಸಲ್ಮಾಭಾನು (38) ಎಂಬ ಮಹಿಳೆಯು ಮಾರ್ಚ್ 10 ರಂದು ಮನೆಯಿಂದ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
122 ಸೆಂ.ಮೀ ಎತ್ತರ, ಸಾಧಾರಣ ಮೈಕಟ್ಟು, ಕೋಲು ಮುಖ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ಉರ್ದು ಭಾಷೆ ಮಾತನಾಡುತ್ತಾರೆ.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.