ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಪ್ರಸಿದ್ಧ ಕ್ರಿಕೆಟ್ ವೀಕ್ಷಕ ವಿವರಣೆಕಾರ ಶ್ರೀಯುತ ರವಿಶಾಸ್ತ್ರಿಯವರು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿ ಶ್ರೀದೇವರ ದರ್ಶನ ಹಾಗೂ ಶ್ರೀಸುಬ್ರಹ್ಮಣ್ಯ ಮಠದ ಸಂಪುಟ ನರಸಿಂಹ ಸ್ವಾಮಿಯ ದರ್ಶನ ಪಡೆದರು.
ಈ ಸಂದರ್ಭದಲ್ಲಿ ದೇವಾಲಯದ ವತಿಯಿಂದ ಗೌರವಿಸಲಾಯಿತು. ಕುಕ್ಕೆ ಶ್ರೀಸುಬ್ರಹ್ಮಣ್ಯ ಮಠದಲ್ಲಿ ಶ್ರೀವಿದ್ಯಾಪ್ರಸನ್ನತೀರ್ಥ ಶ್ರೀಪಾದರು ಶ್ರೀಯುತ ರವಿಶಾಸ್ತ್ರಿಯವರನ್ನು ಶಾಲು ಹೊದೆಸಿ ಫಲ ಮಂತ್ರಾಕ್ಷತೆ ನೀಡಿ ಅನುಗ್ರಹಿಸಿದರು. ಶ್ರೀವೆಂಕಟರಾಜ, ಶ್ರೀವಾದಿರಾಜ ಪೆಜತ್ತಾಯ, ಶ್ರೀಪಿ.ಲಾತವ್ಯ ಆಚಾರ್ಯ ಉಪಸ್ಥಿತರಿದ್ದರು.