ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಹಲವೆಡೆ ಪ್ರವಾಹ ಬಂದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ಜುಲೈ 9ರಂದು ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೆ .ವಿದ್ಯಾ ಕುಮಾರಿ ಅವರು ರಜೆ ಘೋಷಿಸಿ ಆದೇಶಿಸಿದ್ದಾರೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ. ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.