ಮಂಗಳೂರು: ಎಲೆಕ್ಟ್ರಿಷಿಯನ್ ಯುವಕ ನೇಣು ಬಿಗಿದು ಆತ್ಮಹತ್ಯೆ.

ಮಂಗಳೂರು: ಉಳ್ಳಾಲ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಎಂಬಲ್ಲಿ ಯುವಕನೋರ್ವ ನೇಣಿಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿದ ಯುವಕ ತಾರಿಪಡ್ಪು ವೈದ್ಯನಾಥ ದೇವಸ್ಥಾನದ ಬಳಿಯ ನಿವಾಸಿ ಶ್ರವಣ್ ಆಳ್ವ (25). ಶ್ರವಣ್ ಎಲೆಕ್ಟ್ರೀಶಿಯನ್ ವೃತ್ತಿಮಾಡಿಕೊಂಡಿದ್ದು, ಗುರುವಾರ ರಾತ್ರಿ ಸ್ನೇಹಿತನ್ನು ಭೇಟಿಯಾಗಿ ಮನೆಗೆ ಬಂದು ಊಟ ಮಾಡಿ ಟಿವಿ ವೀಕ್ಷಿಸಿ ಬಳಿಕ ಮಲಗಲು ತನ್ನ ಕೋಣೆಗೆ ಹೋಗಿದ್ದಾನೆ. ಮಧ್ಯರಾತ್ರಿ ಶ್ರವಣ್ ಅಣ್ಣ ಕೆಲಸ ಮುಗಿಸಿ ಮನೆಗೆ ಬಂದಾಗ ಶ್ರವಣ್ ಬೆಡ್ ರೂಮಿನ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನು.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಘಟನಾ ಸ್ಥಳಕ್ಕೆ ಉಳ್ಳಾಲ ಪೋಲಿಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.