ಮಂಗಳೂರು: ಫಲ್ಗುಣಿ ನದಿಯಲ್ಲಿ ಈಜಾಡಲು ತೆರಳಿದ್ದ ನಾಲ್ವರಲ್ಲಿ ಇಬ್ಬರು ನೀರುಪಾಲು; ಓರ್ವನ ಮೃತದೇಹ ಪತ್ತೆ.

ಮಂಗಳೂರು: ಫಲ್ಗುಣಿ ನದಿಯಲ್ಲಿ ಈಜಲು ತೆರಳಿದ್ದ ನಾಲ್ಕು ಮಂದಿ ಸ್ನೇಹಿತರ ಪೈಕಿ ಇಬ್ಬರು ನೀರಿನ ಸುಳಿಗೆ ಸಿಲುಕಿ ನೀರುಪಾಲಾದ ಘಟನೆಗೆ ಸಂಬಂಧಿಸಿದಂತೆ ಓರ್ವ ಯುವಕನ ಮೃತದೇಹ ಪತ್ತೆಯಾಗಿದೆ.

ಉರ್ವಸ್ಟೋರಿನ ಅನೀಶ್ (19) ಅವರ ಮೃತದೇಹ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ.

ಅನೀಶ್ ಅವರ ಮೃತದೇಹವನ್ನು ಬೆಂಗ್ರೆಯ ಮುಳುಗು ತಜ್ಞರು ಮೇಲೆಕ್ಕೆತ್ತಿದ್ದಾರೆ. ಕೊಟ್ಟಾರ ಚೌಕಿಯ ಸುಮಿತ್ (20) ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ನಿನ್ನೆ ಬೆಳಗ್ಗೆ ಬೆಂಗ್ರೆಯಿಂದ ಮುಳುಗು ತಜ್ಞರು ಆಗಮಿಸಿ ಯುವಕರಿಗಾಗಿ ಶೋಧ ಕಾರ್ಯ ಆರಂಭಿಸಿದ್ದರು. ಮುಳುಗು ತಜ್ಞರೊಂದಿಗೆ ಅಗ್ನಿಶಾಮಕ ದಳದವರೂ ಕಾರ್ಯಾಚರಣೆ ನಡೆಸುತ್ತಿದ್ದರು. ಬಜಪೆ ಪೊಲೀಸ್ ಇನ್‌ಸ್ಪೆಕ್ಟರ್ ಸಂದೀಪ್ ಜಿ.ಎಸ್. ಹಾಗೂ ಸಿಬ್ಬಂದಿ ಸ್ಥಳದಲ್ಲಿ ಮೊಕ್ಕಾಂ ಇದ್ದರು.