ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಪದವಿ ಪರೀಕ್ಷೆಯಲ್ಲಿ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿಗೆ ಪ್ರಥಮ ರ‍್ಯಾಂಕ್‌

ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಪದವಿ ಕಾಲೇಜಿನ ವಿದ್ಯಾರ್ಥಿನಿ ಪ್ರಾನಂಜಲಿ ಕೆ.ಹೆಚ್ ಬಿಸ್ಸಿ. ಪುಡ್ ಟೆಕ್ನಾಲಜಿ 2021-2024 ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಪದವಿ ಪರೀಕ್ಷೆಯಲ್ಲಿ 90.57.% ಅಂಕಗಳೊಂದಿಗೆ ಪ್ರಥಮ ರ‍್ಯಾಂಕ್‌ ಪಡೆದು ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾಳೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ ಸೀಮಾ ಜಿ ಭಟ್ ತಿಳಿಸಿರುತ್ತಾರೆ ಹಾಗೂ ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಮಣ್ಯ ಸರ್ ಮತ್ತು ನಿರ್ದೇಶಿಕಿಯಾದ ಶ್ರೀಮತಿ ಮಮತಾ ಮತ್ತು ಎಲ್ಲಾ ಉಪನ್ಯಾಸಕ ವೃಂದದವರು ಶುಭ ಹಾರೈಕೆಯನ್ನು ತಿಳಿಸಿರುತ್ತಾರೆ.