ಮಣಿಪಾಲ: ಇಎಸ್‌ಐ ಆಸ್ಪತ್ರೆಗಾಗಿ ಉಪವಾಸ ಸತ್ಯಾಗ್ರಹ

ಉಡುಪಿ: ಕೇಂದ್ರ ಸರಕಾರ ಎರಡು ವರ್ಷಗಳ ಹಿಂದೆ ಮಂಜೂರು ಮಾಡಿದ್ದ ಇಎಸ್‌ಐ ಆಸ್ಪತ್ರೆ ಇನ್ನೂ ಉಡುಪಿಗೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಶೀಘ್ರ ಆಸ್ಪತ್ರೆ ಕಾಮಗಾರಿ ಪ್ರಾರಂಭಿಸುವಂತೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಜಿ.ಎ. ಕೋಟೆಯಾರ್ ನೇತೃತ್ವದಲ್ಲಿ ಗುರುವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಯಿತು.

ಕೇಂದ್ರ ಸರಕಾರ ಹಲವು ಜಿಲ್ಲೆಗಳಿಗೆ ಇಎಸ್‌ಐ ಆಸ್ಪತ್ರೆ ಮಂಜೂರು ಮಾಡಿದೆ. ಆದರೆ ಉಡುಪಿಗೆ ಇನ್ನೂ ಬಂದಿಲ್ಲ. ಇದರಿಂದಾಗಿ ಕಾರ್ಮಿಕರಿಗೆ, ಬಡ ಜನರಿಗೆ ಮತ್ತು ಹಿರಿಯ ನಾಗರಿಕರಿಗೆ ತೊಂದರೆಯಾಗುತ್ತಿದೆ.

ಈ ಸಂಬಂಧ ಹಲವು ಬಾರಿ ಪ್ರತಿಭಟನೆ ವನಡೆಸಿದ್ದರೂ ಪ್ರಯೋಜನವಾಗಿಲ್ಲ. ಇಂದು ಉಪವಾಸ ಸತ್ಯಾಗ್ರಹದಲ್ಲಿ ನೂರು ಜನ ಸೇರಿರಬಹುದು. ಮುಂದಿನ ದಿನಗಳಲ್ಲಿ ಲಕ್ಷಾಂತರ ಜನ ಸೇರಿ ನಮ್ಮ ಹಕ್ಕನ್ನು ಕೇಳಿ ಪಡೆಯುತ್ತೇವೆ ಎಂದು ಹೋರಾಟಗಾರ ಜಿ.ಎ ಕೋಟೆಯಾರ್ ಹೇಳಿದರು. ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿದ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಮನವಿ ಸ್ವೀಕರಿಸಿದರು.