ಮಣಿಪಾಲ ಕೌಶಲಾಭಿವೃದ್ಧಿ ಕೇಂದ್ರದಿಂದ ನಗರಸಭೆ ಸದಸ್ಯರಿಗೆ ಕೌಶಲ ಕಾರ್ಯಾಗಾರ

ಮಣಿಪಾಲ: ಕುಶಲಕರ್ಮಿಗಳು ತಂತ್ರಜ್ಞಾನದ ಆಧುನಿಕತೆಯ ಜೊತೆಗೆ ಹೊಂದಾಣಿಕೆ ಮಾಡಲು ಮತ್ತು ಕೈಗಾರಿಕೆಗಳ ಬೆಳವಣಿಗೆಗೆ ಕೇಂದ್ರ ಸರ್ಕಾರವು ಹಲವಾರು ಯೋಜನೆಗಳನ್ನು ಪ್ರಸ್ತುತಪಡಿಸಿದೆ.

ಸ್ಥಳೀಯ ಜನಪ್ರತಿನಿಧಿಗಳು ಈ ಸೌಲಭ್ಯತೆಗಳ ಮಾಹಿತಿಗಳನ್ನು ಸಾರ್ವಜನಿಕ ವಲಯದಲ್ಲಿ ಜಾಗೃತಿ ಮೂಡಿಸಿ ಮಾಹಿತಿ ಹಂಚಿಕೆ ಮಾಡಬೇಕು ಎಂದು ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.

ನಗರಸಭೆ, ಡಾ. ಟಿ.ಎಂ.ಎ ಪೈ ಪಾಲಿಟೆಕ್ನಿಕ್ ಆವರಣದ ಮಣಿಪಾಲ ಕೌಶಲಾಭಿವೃದ್ಧಿ ಕೇಂದ್ರ (ಎಂ ಎಸ್ ಡಿ ಸಿ), ಜಿಲ್ಲಾ ಕಾರ್ಮಿಕ ಇಲಾಖೆ ಆಶ್ರಯದಲ್ಲಿ ಎಮ್ ಎಸ್ ಡಿ ಸಿ ಸಭಾಂಗಣದಲ್ಲಿ ಸೋಮವಾರ ನಗರಸಭಾ ಸದಸ್ಯರ ಕೌಶಲ ತರಬೇತಿ ಮಾಹಿತಿ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.

ನಗರಸಭೆಯ ಅಧ್ಯಕ್ಷ ಪ್ರಭಾಕರ್ ಪೂಜಾರಿ ಅಧ್ಯಕ್ಷತೆಯನ್ನು ವಹಿಸಿದ್ದರು.ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಸ್ಥಾಯಿ ಸಮಿತಿಯ ಅಧ್ಯಕ್ಷ ಸುಂದರ್ ಜಿ. ಕಲ್ಮಾಡಿ ಜಿಲ್ಲಾ ಕಾರ್ಮಿಕ ಅಧಿಕಾರಿ ಅಲ್ತಾಫ್ ಅಹಮದ್ ಕಮಲ್ ಶಾ, ಡಾ.ಟಿಎಂಎ ಪೈ ಪಾಲಿಟೆಕ್ನಿಕ್ ಪ್ರಾಂಶುಪಾಲ ಡಾ.ಬಿ.ಎಚ್.ಬಿ.ಪೈ, ಎಂಎಸ್ ಡಿಸಿ ಅಧ್ಯಕ್ಷ ಬಿ. ಡಾ. ಸುರ್ಜಿತ್ ಸಿಂಗ್ ಪಾಬ್ಲ, ರಿಜಿಸ್ಟ್ರಾರ್ ಡಾ.ಅಂಜಯ್ಯ ದೇವಿನೇನಿ, ಡಾ.ನಾರಾಯಣ ಶೆಣೈ, ಸೌಂದರ್ಯ ಮತ್ತು ಆರೋಗ್ಯ ಕೇಂದ್ರದ ನಿರ್ದೇಶಕಿ ನೀತಾ ಶೆಟ್ಟಿ, ನಗರಸಭಾ ಸದಸ್ಯರು, ಕಾರ್ಮಿಕ ನಿರೀಕ್ಷಕರು ಉಪಸ್ಥಿತರಿದ್ದರು.

ನಗರಸಭಾ ಸದಸ್ಯ ಮಂಜುನಾಥ್ ಮಣಿಪಾಲ ಸಂಯೋಜಿಸಿ ನಿರೂಪಿಸಿದರು.