ಮಣಿಪಾಲ: ಮಣಿಪಾಲ ಜಿಲ್ಲಾಧಿಕಾರಿ ಕಚೇರಿಯ ಬಳಿ ಡಿವೈಡರ್‌ಗೆ ಸ್ಕೂಟರ್ ಢಿಕ್ಕಿ ಹೊಡೆದು ಯುವಕರೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ಯುವಕ ಕೇಶವ (18). ಮಣಿಪಾಲದಲ್ಲಿ ಹೊಟೇಲ್ ಕೆಲಸ ಮಾಡಿಕೊಂಡಿದ್ದ ಅವರು ಮಣಿಪಾಲದ ಶಾಂತಿ ಖಾತ್ರಿ ಅವರ ಸ್ಕೂಟರ್ ಅನ್ನು ಅವರಿಗೆ ಹೇಳದೆ ಸವಾರಿ ಮಾಡಿಕೊಂಡು ಹೋಗಿದ್ದು ಜಿಲ್ಲಾಧಿಕಾರಿ ಕಚೇರಿಯ ಬಳಿ ಡಿವೈಡರ್‌ಗೆ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದರು. ಕೂಡಲೇ ಆತನನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದರು. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.