ಮಣಿಪಾಲ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಹೃದಯ ಸ್ತಂಭನ: ವ್ಯಕ್ತಿ ಮೃತ್ಯು.

ಮಣಿಪಾಲ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಹೃದಯ ಸ್ತಂಭನಗೊಂಡು ರಾಘವೇಂದ್ರ (49) ಸಾವನ್ನಪ್ಪಿದ್ದಾರೆ.

ಸೆ.17ರಂದು ಅಲೆವೂರು ಗ್ರಾಮದ ಮಂಚಿಕೆರೆಯ ಮಣಿಪಾಲ-ಅಲೆವೂರು ರಸ್ತೆಯಲ್ಲಿ ಕೆ. ಅಶ್ವಥ್‌ ಅವರೊಂದಿಗೆ ಪುರೋಹಿತ ಕೆಲಸ ಮಾಡಿಕೊಂಡಿದ್ದ ರಾಘವೇಂದ್ರ ಅವರು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗಲೇ ಹೃದಯ ಸ್ತಂಭನಗೊಂಡು ವಾಹನ ಸಹಿತ ರಸ್ತೆಗೆ ಬಿದ್ದು ಅಸ್ವಸ್ಥಗೊಂಡರು.

ಕೂಡಲೇ ಅವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫ‌ಲಿಸದೆ ಸಾವನ್ನಪ್ಪಿದ್ದಾರೆ.